
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ವಿವರಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಪೆರಿಕಲ್ ಎಂ. ಸುಂದರ್, ಉಪಾಧ್ಯಕ್ಷರಾದ ಶ್ರೀ ಬಿ.ವಿ. ಗೋಪಾಲ್ ರೆಡ್ಡಿ ಮತ್ತು ಮಾಜಿ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿಯವರು ಹಾಗೂ ನಿರ್ದೇಶಕರಾದ ಡಾ. ರವೀಂದ್ರಸ್ವಾಮಿ ಇವರನ್ನು ಒಳಗೊಂಡ ನಿಯೋಗವು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀ ಸುರೇಶ್ ಕುಮಾರ್ ಮಾನ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ವಿವರಿಸಿದರು. ಸಭೆಯಲ್ಲಿ CBSE, ICSE, IB, STATE BOARD, ಆಡಳಿತ ಮಂಡಳಿಗಳ ಒಕ್ಕೂಟದ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಬೆಂಗಳೂರು ಗಳಿಂದ ಬಂದಿದ್ದ ಸುಮಾರು 30 ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಗಳ ಸದಸ್ಯರು ಭಾಗವಹಿಸಿದ್ದರು.